ಕನ್ನಡ ಸಾಹಿತ್ಯ ಜನಪರವಾದದ್ದು

- Advertisement -
- Advertisement -

ಕನ್ನಡ ಸಾಹಿತ್ಯವು ಆರಂಭದಿಂದ ಇಂದಿನವರೆಗೂ ಜನಪರವಾಗಿಯೇ ನಡೆದು ಬಂದಿದೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್‌.ಅನಂತಕೃಷ್ಣ ತಿಳಿಸಿದರು.
ತಾಲ್ಲೂಕಿನ ಹನ್ನೊಂದನೇ ಮೈಲಿಕಲ್ಲಿನ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಬುಧವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ‘ಶಾಲೆಗೊಂದು ಕನ್ನಡ ಕಾರ್ಯಕ್ರಮ – ಕಲಿಯುವ ಕೈಗೆ ಓದುವ ಪುಸ್ತಕ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕನ್ನಡ ಸಂಸ್ಕೃತಿಯನ್ನು ಪೋಷಿಸುವ, ಬೆಳೆಸುವ, ದನಿಯಾಗುವ ಹಂಬಲದಿಂದ ಹುಟ್ಟಿಕೊಂಡಿರುವ ಕನ್ನಡ ಸಾಹಿತ್ಯ ಪರಿಷತ್ ನೂರ ಒಂದು ವರ್ಷಗಳ ಸಾಧನಾ ಪಯಣದಲ್ಲಿ ಕನ್ನಡ ನಾಡು-ನುಡಿಗಾಗಿ ನಡೆದ ಎಲ್ಲ ಚಟುವಟಿಕೆಗಳಲ್ಲಿ ಮಹತ್ತ್ವದ ಪಾತ್ರ ವಹಿಸಿದೆ. ಕಳೆದ ಒಂದು ಶತಮಾನದಿಂದ ಕನ್ನಡ ಜನತೆ ಪರಿಷತ್ತಿನೊಡನೆ ನಿಕಟ ಸಂಬಂಧವಿರಿಸಿಕೊಂಡಿದೆ. ಪರಿಷತ್ತಿನ ಸಾಹಿತ್ಯ ಸಮ್ಮೇಳನಕ್ಕೆ ಲಕ್ಷಾಂತರ ಜನ ಸೇರುವುದೇ ಇದಕ್ಕೆ ಅತ್ಯುತ್ತಮ ನಿದರ್ಶನ. ಪರಿಷತ್ತು ನಮ್ಮದು ಎಂಬ ಭಾವ ಕನ್ನಡಿಗರ ಮನಸ್ಸಿಗಿದೆ. ಇನ್ನು ಯಾವ ಸಮ್ಮೇಳನಗಳಿಗೂ ಪರಿಷತ್ತಿನ ಸಮ್ಮೇಳನಕ್ಕಿರುವ ಸಾಂಸ್ಕೃತಿಕ, ಸಾಮಾಜಿಕ ಮಹತ್ತ್ವವಿಲ್ಲ ಎಂದು ಹೇಳಿದರು.
ಕಸಾಪ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎ.ಎಂ.ತ್ಯಾಗರಾಜ್‌ ಮಾತನಾಡಿ, ಭೌಗೋಳಿಕವಾಗಿ ವಿಶಿಷ್ಟ ಲಕ್ಷಣಗಳನ್ನು ಹೊಂದಿರುವ ಕರ್ನಾಟಕದಲ್ಲಿ ಭಾಷೆ, ಚರಿತ್ರೆ ಹಾಗೂ ಸಾಹಿತ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆದಷ್ಟು ಮತ್ತ್ಯಾವ ರಾಜ್ಯಗಳಲ್ಲೂ ನಡೆದಿಲ್ಲ. ಕನ್ನಡ ಭಾಷೆಯ ಪ್ರಜ್ಞೆ ಪ್ರತಿಯೊಬ್ಬರಲ್ಲಿ ಮೂಡಬೇಕಿದೆ. ಕನ್ನಡ ಸಾಹಿತ್ಯವನ್ನು ಮಕ್ಕಳಿಗೆ ಪರಿಚಯಿಸುವ ಕೆಲಸ ಆಗಬೇಕಿದೆ ಎಂದು ಹೇಳಿದರು.
‘ಕರ್ನಾಟಕ ಏಕೀಕರಣ’ ಎಂಬ ವಿಷಯವಾಗಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಹತ್ತನೇ ತರಗತಿಯ ಡಿ.ಎಸ್‌.ನವೀನ್‌,ಶುಭಾ ಮತ್ತು ಕೆ.ಎಸ್‌.ಪ್ರಕಾಶ್‌ ಅವರಿಗೆ ಪುಸ್ತಕ ಮತ್ತು ಪ್ರಮಾಣಪತ್ರವನ್ನು ಕ.ಸಾ.ಪ ವತಿಯಿಂದ ನೀಡಲಾಯಿತು.
ಈ ಸಂದರ್ಭದಲ್ಲಿ ತಾಲ್ಲೂಕು ಕ.ಸಾ.ಪ ವತಿಯಿಂದ ಶಾಲೆಯ ಗ್ರಂಥಾಲಯಕ್ಕೆ ‘ಎ.ಪಿ.ಜೆ ಅಬ್ದುಲ್‌ ಕಲಾಂ’, ‘ಸಿ.ಎನ್‌.ಆರ್‌.ರಾವ್‌’ ಕುರಿತ ಪುಸ್ತಕಗಳು ಮತ್ತು ‘ಕನ್ನಡ ರತ್ನಕೋಶ’ವನ್ನು ನೀಡಲಾಯಿತು.
ಭಾವಗೀತೆ ಹಾಡಿದ ನಿಖಿಲ್‌ದೇವ್‌, ಏಕಪಾತ್ರಾಭಿನಯ ನಡೆಸಿದ ಎನ್‌.ಕೆ.ಮಂಜುನಾಥ್‌, ಜನಪದ ಗೀತೆ ಹಾಡಿದ ಎಸ್‌.ಎನ್‌.ನವೀನ್‌ಕುಮಾರ್‌ ಮತ್ತು ಜೆ.ಕೆ.ಶ್ರೀಕಾಂತ್‌ ಅವರಿಗೆ ಕಸಾಪ ತಾಲ್ಲೂಕು ಘಟಕದಿಂದ ಪುಸ್ತಕಗಳನ್ನು ನೀಡಲಾಯಿತು.
ಮುಖ್ಯಶಿಕ್ಷಕಿ ಎ.ಆರ್‌.ಕುಬ್ರಾಮುಬೀನ್‌, ಶಿಕ್ಷಕರಾದ ಕೆ.ಪಿ.ಶಿವಕುಮಾರ್‌, ಬಿ.ಈಶ್ವರರೆಡ್ಡಿ, ಡಿ.ಪಿ.ಮುರಳೀಧರ, ಪದ್ಮಿನಿ.ಅ.ರಜಪೂತ, ಎಂ.ವಿ.ಪ್ರೇಮಕುಮಾರ್‌, ಸಿ.ಎಸ್‌.ನಾಗಮಣಿ, ಬ್ರಹ್ಮಿಣಿ ಮತ್ತಿತರರು ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!