ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದೊಂದಿಗೆ ಮಾರ್ಚ್ 24 ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ‘ಕರ್ನಾಟಕ ಏಕೀಕರಣದ 60ರ ಸಂಭ್ರಮ’ ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಚಂದ್ರಾನಾಯ್ಕ ಮಾಡಲಿದ್ದು, ಪ್ರಾಸ್ತಾವಿಕ ನುಡಿಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಕೈವಾರ ಎನ್.ಶ್ರೀನಿವಾಸ್ ಹೇಳಲಿದ್ದಾರೆ. ಕರ್ನಾಟಕ ಏಕೀಕರಣದ ಬಗ್ಗೆ ಉಪನ್ಯಾಸವನ್ನು ಚಿಂತಾಮಣಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಎಂ.ಎನ್.ರಘು ನೀಡಲಿದ್ದಾರೆ. ಕನ್ನಡಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಕೋರಿದ್ದಾರೆ.
- Advertisement -
- Advertisement -
- Advertisement -