ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ತಾಲ್ಲೂಕು ಬಿಜೆಪಿ ಘಟಕದಿಂದ ಬುಧವಾರ ತಹಶೀಲ್ದಾರ್ ಮನೋರಮಾ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.
ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಬೆಂಗಳೂರಿನಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಘು ಲಾಠಿ ಚಾರ್ಜ್ ಮಾಡಿದ್ದರು. ಇದನ್ನು ಖಂಡಿಸಿ ತಾಲ್ಲೂಕು ಬಿಜೆಪಿ ಘಟಕದ ಸದಸ್ಯರು ರಾಜ್ಯಪಾಲರಿಗೆ ತಲುಪಿಸುವಂತೆ ತಹಶೀಲ್ದಾರರಿಗೆ ಮನವಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಅವರು ರಾಜ್ಯ ಸರ್ಕಾರ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಗೆ ನೀಡಿರುವ ರಕ್ಷಣೆಯು ತಾರತಮ್ಯ ಧೋರಣೆ ಎಂದು ಆರೋಪಿಸಿದರು.
ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಬಿ.ಸಿ.ನಂದೀಶ್, ಮಂಜುಳಮ್ಮ, ದಾಮೋದರ್, ಪುರುಷೋತ್ತಮ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -