ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮೇ 05 ರಂದು ಭಗೀರಥ ಜಯಂತಿಯನ್ನು ತಾಲೂಕು ಕಚೇರಿ ಸಭಾಂಗಣದಲ್ಲಿ ಆಚರಿಸಲು ತೀರ್ಮಾನಿಸಲಾಯಿತು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುದವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಭಗೀರಥ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ತಹಸೀಲ್ದಾರ್ ಎಸ್. ಅಜಿತ್‍ಕುಮಾರ್ ರೈ ಮಾತನಾಡಿ ಪ್ರತಿವರ್ಷದಂತೆ ಈ ವರ್ಷವೂ ಭಗೀರಥ ಜಯಂತಿಯನ್ನು ಕಚೇರಿಯ ಸಬಾಂಗಣದಲ್ಲಿ ಆಚರಿಸಲಾಗುವುದು. ಸಮಾರಂಭದ ಆಹ್ವಾನ ಪತ್ರಿಕೆ ಸೇರಿದಂತೆ ಕಾರ್ಯಕ್ರಮಕ್ಕೆ ಸಮಾಜದ ಎಲ್ಲರನ್ನು ಆಹ್ವಾನಿಸುವ ಕೆಲಸವನ್ನು ಸಿಬ್ಬಂದಿ ಮಾಡುವರು. ಸಮಾರಂಭದಲ್ಲಿ ಮುಖ್ಯ ಭಾಷಣಕಾರರಾಗಿ ಯಾರನ್ನು ಆಯ್ಕೆ ಮಾಡಬೇಕು ಎನ್ನುವುದನ್ನು ಸಮಾಜದ ಮುಖಂಡರು ಸೂಚಿಸಿದಲ್ಲಿ ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಹಾಕಿಸಲಾಗುವುದು. ಇನ್ನುಳಿದಂತೆ ಕಾರ್ಯಕ್ರಮದಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸರಳ ಹಾಗು ಸುಂದರವಾಗಿ ಕಾರ್ಯಕ್ರಮ ನೆರವೇರಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥ ರೆಡ್ಡಿ, ಕೃಷಿ ಸಹಾಯಕ ನಿರ್ದೇಶಕ ದೇವೇಗೌಡ, ಭಗೀರಥ ಉಪ್ಪಾರ ಮಹಾಸಭಾ ತಾಲ್ಲೂಕು ಅಧ್ಯಕ್ಷ ಟಿ. ಗಂಗಪ್ಪ ಮತ್ತಿತರರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -