ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಕೂಡದು ಎಂದು ಶಾಸಕ ಎಂ. ರಾಜಣ್ಣ ಹೇಳಿದರು.
ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಕೆರೆ ಹಾಗು ಹೆಣ್ಣೂರು ಗ್ರಾಮಗಳಲ್ಲಿ ಸುಮಾರು 14.80 ಲಕ್ಷ ರೂಗಳ ವೆಚ್ಚದಲ್ಲಿ ಕೈಗೊಂಡಿರುವ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.
ಅರಕೆರೆ ಗ್ರಾಮದ ಬೈಲಾಂಜನೇಯ ಸ್ವಾಮಿ ದೇವಾಲಯದ ರಸ್ತೆ ಡಾಂಬರೀಕರಣ ಕಾಮಗಾರಿ ಹಾಗು ಹೆಣ್ಣೂರು ಗ್ರಾಮದ ಮೆಟ್ಲಿಂಗ್ ಕಾಮಗಾರಿ ನಡೆಯುವಾಗ ಪಕ್ಷಾತೀತವಾಗಿ ಜನರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಗ್ರಾಮದ ಅಭಿವೃದ್ದಿಗೆ ಸಹಕರಿಸಬೇಕು. ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಇದರಿಂದ ಗ್ರಾಮ ಸುಂದರವಾಗಿರುವುದರ ಜೊತೆಗೆ ಗ್ರಾಮಸ್ಥರ ಆರೋಗ್ಯವೂ ಸುಧಾರಿಸುತ್ತದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ. ಲಕ್ಷ್ಮಿನಾರಾಯಣ, ಜಿಲ್ಲಾ ಪಂಚಾಯಿತಿ ಸದಸ್ಯೆ ತನುಜಾ ರಘು, ತಾ.ಪಂ ಸದಸ್ಯ ರಾಜಶೇಖರ್, ಚೀಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಳಿನ ಮಂಜುನಾಥ್, ಮುಖಂಡರಾದ ಹೆಚ್. ಕ್ರಾಸ್ ರವಿ, ಚನ್ನರಾಯಪ್ಪ, ಮುನಿಶಾಮಿಗೌಡ, ವೆಂಕಟೇಶಪ್ಪ, ಆರ್. ನಾಗರಾಜು, ಸಿ.ಎಂ. ನಾರಾಯಣಸ್ವಾಮಿ, ಚೌಡಪ್ಪ, ವೆಂಕಟೇಶ್, ಮಂಜುನಾಥ್, ಶ್ರೀನಿವಾಸ್, ಮೋಹನ್ ಹಾಗೂ ಮುಂತಾದವರು ಹಾಜರಿದ್ದರು.
- Advertisement -
- Advertisement -
- Advertisement -