ರಾಜಕೀಯ ಲಾಭಕ್ಕಾಗಿ ಪೊಲೀಸ್ ಅಧಿಕಾರಿ ವರ್ಗಾವಣೆಗೆ ಒತ್ತಾಯ

- Advertisement -
- Advertisement -

ಪೊಲೀಸ್ ಅಧಿಕಾರಿಯೋರ್ವರನ್ನು ತಮ್ಮ ರಾಜಕೀಯ ಲಾಭಕ್ಕಾಗಿ ವರ್ಗಾವಣೆ ಮಾಡುವಂತೆ ಪಟ್ಟುಹಿಡಿದು ಪ್ರತಿಭಟನೆ ನಡೆಸಿರುವ ಕ್ರಮ ಖಂಡನೀಯ ಎಂದು ಕರವೇ ತಾಲೂಕು ಅಧ್ಯಕ್ಷ ಎಂ.ವೆಂಕಟರವಣಪ್ಪ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಇವರು ಕಳೆದ ಐದು ವರ್ಷಗಳ ಹಿಂದೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ದಿಬ್ಬೂರಹಳ್ಳಿ ಗ್ರಾ.ಪಂ ಯೊಂದರಲ್ಲೇ ಸುಮಾರು 10ಕ್ಕೂ ಹೆಚ್ಚು ಮಂದಿ ಕಳಪೆ ಮಧ್ಯ ಸೇವಿಸಿ ಮೃತಪಟ್ಟಿದ್ದು ಈ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಯಥೇಚ್ಛವಾಗಿತ್ತು. ಮರಳು ದಂಧೆಯಲ್ಲಿ ತೊಡಗಿದ್ದ ಬಹಳಷ್ಟು ದಂಧೆಕೋರರಿಗೆ ದಿಬ್ಬೂರಹಳ್ಳಿ ಠಾಣೆ ಪಿಎಸ್ಸೈ ರಾಘವೇಂದ್ರರಂತಹ ದಕ್ಷ ಅಧಿಕಾರಿಯಿಂದ ಅಕ್ರಮವಾಗಿ ಮರಳು ಸಾಗಿಸಲು ಆಗುವುದಿಲ್ಲ ಎಂಬ ಕಾರಣಕ್ಕೆ ಶಾಸಕರ ನೇತೃತ್ವದಲ್ಲಿ ಠಾಣೆಯ ಮುಂದೆ ಧರಣಿ ನಡೆಸಿರುವ ಕ್ರಮ ಶಾಸಕ ಎಂ.ರಾಜಣ್ಣರ ಘನತೆಗೆ ತಕ್ಕುದಲ್ಲ.
ಒಬ್ಬ ಸಾಮಾನ್ಯ ಸರಕಾರಿ ಅಧಿಕಾರಿಯನ್ನು ವರ್ಗಾವಣೆ ಮಾಡಲು ಶಾಸಕರು ಜಿಲ್ಲಾ ಹಾಗು ರಾಜ್ಯ ಮಟ್ಟದ ಅಧಿಕಾರಿಗಳಿಗೆ ಅಥವ ತಮ್ಮ ಶಕ್ತಿ ಉಪಯೋಗಿಸಿ ಸರಕಾರದ ಮಟ್ಟದಲ್ಲಿ ವರ್ಗಾವಣೆ ಮಾಡಬಹುದಿತ್ತು ಆದರೆ ಜಿ.ಪಂ ಹಾಗು ತಾ.ಪಂ ಚುನಾವಣೆ ಸಮಯದಲ್ಲಿ ತಮ್ಮ ರಾಜಕೀಯ ಲಾಭಕ್ಕಾಗಿ ಕಾರ್ಯಕರ್ತರನ್ನು ಒಕ್ಕಲೆಬ್ಬಿಸಿ ಠಾಣೆಯ ಮುಂದೆ ಪ್ರತಿಭಟನೆ ಮಾಡುವುದು ಶಾಸಕರಿಗೆ ಶೋಭೆಯಲ್ಲ ಎಂದಿದ್ದಾರೆ.
ಕಾನೂನು ವಿರೋಧಿ ಚಟುವಟಿಕೆ ನಡೆಸುವವರ ವಿರುದ್ದ ಕ್ರಮ ಜರುಗಿಸುವ ದಕ್ಷ ಪೊಲೀಸ್ ಅಧಿಕಾರಿ ರಾಘವೇಂದ್ರರನ್ನು ಯಾವುದೇ ಕಾರಣಕ್ಕೂ ವರ್ಗಾವಣೆ ಮಾಡಬಾರದು. ಒಂದು ವೇಳೆ ಶಾಸಕರ ಒತ್ತಾಯಕ್ಕೆ ಮಣಿದು ವರ್ಗಾವಣೆ ಮಾಡಿದ್ದೇ ಆದಲ್ಲಿ ಕರವೇ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!