ಕೃಷಿಗೆ ಸಂಬಂಧಪಟ್ಟ ಮತ್ತು ಎಲ್ಲಾ ರೀತಿಯ ಸ್ತ್ರೀಶಕ್ತಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ರೇಷ್ಮೆ ಗೂಡಿಗೆ ಒಂದು ಕೆಜಿಗೆ ೪೫೦ ರೂ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಡಾ.ಸ್ವಾಮಿನಾಥನ್ ವರದಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ವಿಧಾನಸೌಧ ಮುತ್ತಿಗೆ ಹಾಕಲು ರೈತ ಸಂಘ( ಕೆ.ಎಸ್.ಪುಟ್ಟಣ್ಣಯ್ಯ ಬಣ)ದ ಸದಸ್ಯರು ಸೋಮವಾರ ಬಸ್ ನಿಲ್ದಾಣದ ಬಳಿ ಸೇರಿ ಘೋಷಣೆಗಳನ್ನು ಕೂಗಿದರು.
ಬಸ್ ನಿಲ್ದಾಣದ ಬಳಿ ಮಾನವ ಸರಪಣಿಯನ್ನು ನಿರ್ಮಿಸಿ ಕೆಲ ಕಾಲ ರಸ್ತೆ ತಡೆ ನಡೆಸಿದರು. ಹಲವು ಬಸ್ಸುಗಳಲ್ಲಿ ಬೆಂಗಳೂರಿಗೆ ಹೊರಟ ರೈತರು, ಅನ್ನದಾತನ ಕೂಗು ವಿಧಾನಸೌಧಕ್ಕೆ ಮುಟ್ಟಿಸುತ್ತೇವೆ ಎಂದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಎಸ್.ವೆಂಕಟಸ್ವಾಮಿ ಮಾತನಾಡಿ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೊಟ್ಟ ಮಾತಿನಂತೆ ರಾಜ್ಯದ ಎಲ್ಲಾ ರೈತರ ಸಾಲ ಮನ್ನಾ ಮಾಡಬೇಕು. ಬೆಳೆ ಸಾಲ ಪಡೆದ ಎಲ್ಲಾ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದು ವಿಧಾನಸೌಧ ಮುತ್ತಿಗೆ ಹಾಕುತ್ತಿದ್ದೇವೆ ಎಂದರು.
ರೈತ ಸಂಘ( ಕೆ.ಎಸ್.ಪುಟ್ಟಣ್ಣಯ್ಯ ಬಣ)ದ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್ ,ಅರುಣ್ ಕುಮಾರ್, ಪ್ರತೀಶ್, ಮಾರುತಿ, ಗೋವಿಂದಪ್ಪ, ಶಂಕರ್, ನಾರಾಯಣ್, ದೇವರಾಜು, ವೆಂಕಟರೋಣಪ್ಪ, ಶಶಿಕುಮಾರ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







