27.5 C
Sidlaghatta
Wednesday, July 30, 2025

ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಶ್ರೀ ರಾಮನವಮಿ ಆಚರಣೆ

- Advertisement -
- Advertisement -

ತಾಲ್ಲೂಕಿನಾದ್ಯಂತ ಶ್ರೀರಾಮನವಮಿಯನ್ನು ವಿವಿಧ ರಾಮ ದೇವಾಲಯಗಳಲ್ಲಿ ವಿಶೇಷ ಪೂಜೆಸಲ್ಲಿಸಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಜಂಗಮಕೋಟೆ, ನಾಗಮಂಗಲ, ಚೌಡಸಂದ್ರ, ಅಪ್ಪೇಗೌಡನಹಳ್ಳಿ ಗೇಟ್‌, ಮೇಲೂರು, ಹುಣಸೇನಹಳ್ಳಿ ಸ್ಟೇಷನ್‌, ಎಚ್‌.ಕ್ರಾಸ್‌, ಮಳಮಾಚನಹಳ್ಳಿ ಮುಂತಾದೆಡೆ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಿ ಭಕ್ತರಿಗೆ ಸೌತೆಕಾಯಿ ಹೆಸರುಬೇಳೆ ಮತ್ತು ಪಾನಕವನ್ನು ವಿತರಿಸಿದರು.
ನಗರದ ಕೋಟೆ ವೃತ್ತದ ಶ್ರೀರಾಮ ದೇವಾಲಯ, ಉಲ್ಲೂರುಪೇಟೆಯ ಭಜನೆ ಮಂದಿರ ಹಾಗೂ ಚಿಂತಾಮಣಿ ರಸ್ತೆಯಲ್ಲಿರುವ ವೀರಾಂಜನೇಯಸ್ವಾಮಿ ದೇವಾಲಯಗಳಲ್ಲಿ ರಾಮನವಮಿಯ ಪ್ರಯುಕ್ತ ಪೂಜಾಕಾರ್ಯಕ್ರಮಗಳು ನಡೆದವು.
ಚಿಂತಾಮಣಿ ರಸ್ತೆಯಲ್ಲಿರುವ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಸೀತಾ ರಾಮ ಲಕ್ಷ್ಮಣಆಂಜನೇಯಸ್ವಾಮಿ ಮತ್ತು ವೀರಾಂಜನೇಯಸ್ವಾಮಿ ಉತ್ಸವ ವಿಗ್ರಹಗಳಿಗೆ ಅಭಿಷೇಕವನ್ನು ನಡೆಸಲಾಯಿತು. ವೀರಾಂಜನೇಯಸ್ವಾಮಿಗೆ ಅಭಿಷೇಕ, ಪೂಜೆ, ವಿಶೇಷ ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ಸೀತಾರಾಮ ಕಲ್ಯಾಣೋತ್ಸವಕ್ಕೆ ನೂರಾರು ಜನರು ಸಾಕ್ಷಿಯಾದರು. ಉಟ್ಲು ಕಂಬದ ಪೂಜೆ, ಕ್ಷೀರ ಉಟ್ಲು ಮಹೋತ್ಸವ ಹಾಗೂ ಮನರಂಜನಾ ಉಟ್ಲೋತ್ಸವವನ್ನು ನಡೆಸಿದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!