ಬಯಲುಸೀಮೆಯ ನೀರಾವರಿ ಹೋರಾಟಕ್ಕೆ ಶಕ್ತಿ ತುಂಬಲು ಮತ್ತು ಪರಿಸರ, ಶಿಕ್ಷಣ, ಆರೋಗ್ಯ ಹಾಗು ಉದ್ಯೋಗ ಕ್ಷೇತ್ರದಲ್ಲಿ ಯುವಜನತೆಯನ್ನು ಹೆಚ್ಚಿನ ರೀತಿಯಲ್ಲಿ ತೊಡಗಿಸುವ ಉದ್ದೇಶದಿಂದ ಸ್ಥಾಪಿತವಾದ ಯುವಶಕ್ತಿ ಸಂಘಟನೆಯನ್ನು ವಿಸ್ತರಿಸುವ ಸಲುವಾಗಿ ಶನಿವಾರ ಶಿಡ್ಲಘಟ್ಟದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಲಾಯಿತು.
ಶಿಡ್ಲಘಟ್ಟ ತಾಲ್ಲೂಕು ಅಧ್ಯಕ್ಷರಾಗಿ ಟಿ.ಇ.ವಿಶ್ವನಾಥ, ಉಪಾಧ್ಯಕ್ಷರಾಗಿ ಎಂ.ಮಧು, ಪ್ರಧಾನ ಕಾರ್ಯದರ್ಶಿಯಾಗಿ ವಿ.ಎ.ಗಿರೀಶ್, ಜಂಟಿ ಕಾರ್ಯದರ್ಶಿಯಾಗಿ ಎ.ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿಯಾಗಿ ಕೆ.ಸುಧಾಕರ್, ಜಂಟಿ ಸಂಘಟನಾ ಕಾರ್ಯದರ್ಶಿಯಾಗಿ ಎಚ್.ಎನ್.ಮುನಿರಾಜು ರನ್ನು ಆಯ್ಕೆ ಮಾಡಲಾಯಿತು.
ನೂತನ ಪದಾಧಿಕಾರಿಗಳನ್ನುದ್ದೇಶಿಸಿ ಯುವಶಕ್ತಿಯ ರಾಜ್ಯಾಧ್ಯಕ್ಷ ಶಿವಪ್ರಕಾಶ್‌ರೆಡ್ಡಿ ಮಾತನಾಡಿ ಬಯಲುಸೀಮೆ ಜಿಲ್ಲೆಗಳ ಜ್ವಲಂತ ಸಮಸ್ಯೆಗಳಾದ ಶಾಶ್ವತ ನೀರಾವರಿ ಸೇರಿದಂತೆ ಪರಿಸರ ಸಂರಕ್ಷಣೆಗಾಗಿ ಹೋರಾಡುವುದೇ ಯುವಶಕ್ತಿ ಸಂಘಟನೆಯ ಪದಾಧಿಕಾರಿಗಳ ಧ್ಯೇಯವಾಗಬೇಕೆಂದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ವಿಜಯಬಾವರೆಡ್ಡಿ, ರಾಜ್ಯ ಜಂಟಿ ಕಾರ್ಯದರ್ಶಿ ಬಿ.ವಿ.ರಾಘವೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಪಿ.ನಾಗಭೂಷಣ, ಎಂ.ಕೆ.ಸುನಿಲ್‌ಕುಮಾರ್, ಆರ್.ನವೀನ್, ಎನ್.ಎ.ನರಸಿಂಹಮೂರ್ತಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -