ಸಾಮಾಜಿಕ ಜಾಲ ತಾಣಗಳಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ವಿಡಿಯೋ ಸಂಭಾಷಣೆಗಳನ್ನು ಹಾಕುವ ಮೂಲಕ ರಾಜ್ಯದಲ್ಲಿ ಕೋಮು ಸೌಹಾರ್ಧ ಕೆಡಿಸುತ್ತಿರುವ ದೇಶದ್ರೋಹಿಗಳನ್ನು ಉಗ್ರವಾಗಿ ಶಿಕ್ಷಿಸಲು ಸರ್ಕಾರ ಮುಂದಾಗಬೇಕು ಎಂದು ಹಿಂದೂ ಜಾಗರಣ ವೇದಿಕೆ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್ ಒತ್ತಾಯಿಸಿದರು.
ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಹಾಗು ಫೇಸ್‌ಬುಕ್‌ನಲ್ಲಿ ಹಿಂದೂ ಸಮುದಾಯದ ವಿರುದ್ಧ ಅವಹೇಳನಕಾರಿ ಸಂಭಾಷಣೆಯನ್ನು ದೃಶ್ಯೀಕರಿಸಿ ಹರಿ ಬಿಟ್ಟಿರುವ ತುಮಕೂರು ಜಿಲ್ಲೆಯ ಶಿರಾ ನಗರದ ಸಲ್ಮಾನ್ ಎಂಬ ದೇಶದ್ರೋಹಿಯ ವಿರುದ್ದ ಶ್ರೀರಾಮಸೇನೆ ಹಾಗು ಹಿಂದೂ ಜಾಗರಣ ವೇದಿಕೆ ಸಹಯೋಗದಲ್ಲಿ ಪ್ರತಿಭಟನೆ ಮೆರವಣಿಗೆ ನಡೆಸಿ ತಹಸೀಲ್ದಾರ್ ಗೈರುಹಾಜರಿಯಲ್ಲಿ ಶಿರಸ್ತೇದಾರರಿಗೆ ಸೋಮವಾರ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.
ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಹಾಗು ಫೇಸ್‌ಬುಕ್ ಗಳಲ್ಲಿ ತುಮಕೂರು ಜಿಲ್ಲೆಯ ಶಿರಾ ನಗರದ ಮುಸ್ಲಿಂ ಯುವಕನಾದ ಸಲ್ಮಾನ್ ಎಂಬುವವನು ಹಿಂದೂಗಳ ವಿರುದ್ಧ ಅದರಲ್ಲಿಯೂ ಮುಖ್ಯವಾಗಿ ಮಹಿಳೆಯರ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿರುವುದಷ್ಟೇ ಅಲ್ಲದೇ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು ಅದು ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದೆ.
ಕೂಡಲೇ ಸರ್ಕಾರ ಇಂತಹ ದೇಶದ್ರೋಹಿಗಳನ್ನು ಬಂದಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಗೈರುಹಾಜರಿಯಲ್ಲಿ ಶಿರಸ್ತೇದಾರ್ ಮುನಿಕೃಷ್ಣಪ್ಪರಿಗೆ ಮನವಿ ಪತ್ರ ಸಲ್ಲಿಸಿದರು.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾಧ್ಯಕ್ಷ ಮಂಜುನಾಥ್, ತಾಲ್ಲೂಕು ಸಂಚಾಲಕ ಯೋಗಾನಂದ್, ನಗರಾಧ್ಯಕ್ಷ ಮಹೇಶ್, ಶ್ರೀರಾಮಸೇನೆಯ ಮಂಜುನಾಥ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಬಿ.ಸಿ.ನಂದೀಶ್, ನಗರಸಭೆ ಸದಸ್ಯ ಎಸ್.ರಾಘವೇಂದ್ರ, ಅಶ್ವತ್ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -