21.1 C
Sidlaghatta
Tuesday, October 14, 2025

ಸಿ.ಆರ್.ಸಿ. ವ್ಯಾಪ್ತಿಯ ಶಾಲೆಗಳ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟನೆ

- Advertisement -
- Advertisement -

ತಾಲ್ಲೂಕಿನ ತುಮ್ಮನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಂಗಳವಾರ ನಡೆದ ತುಮ್ಮನಹಳ್ಳಿ ಸಿ.ಆರ್.ಸಿ. ವ್ಯಾಪ್ತಿಯ ಶಾಲೆಗಳ ಪ್ರತಿಭಾ ಕಾರಂಜಿ ಉದ್ಘಾಟಿಸಿ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ವಿಜಯಮ್ಮ ಕದಿರಪ್ಪ ಮಾತನಾಡಿದರು.
ಮಕ್ಕಳ ಸರ್ವತೋಮುಖ ಪ್ರಗತಿಗೆ ಪ್ರತಿಭಾಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆ. ಇದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಅವರು ತಿಳಿಸಿದರು.
ಹಿಂಜರಿಕೆಯನ್ನು ಬಿಟ್ಟು ಮಕ್ಕಳು ತಮಗೆ ಆಸಕ್ತಿಯಿರುವ ಸ್ಪರ್ಧೆಗಳಲ್ಲಿ ಭಾಗವಹಿಸಿ. ಗೆಲುವು ಸೋಲನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡಿ. ಭಾಗವಹಿಸುವಿಕೆ ಮುಖ್ಯ ಎಂದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಸುರೇಂದ್ರಪ್ಪ, ಎಸ್‌ಡಿಎಂಸಿ ಅಧ್ಯಕ್ಷ ನಾರಾಯಣ ಸ್ವಾಮಿ, ಗ್ರಾಮದ ರಮೇಶ್, ಬಿಆರ್‌ಪಿ ತ್ಯಾಗರಾಜ, ನೇತ್ರ, ಸಿಆರ್‌ಪಿ ಲಕ್ಷ್ಮಣ ರೆಡ್ಡಿ, ನರಸಿಂಹರಾಜು, ಪ್ರಕಾಶ್, ವೀಣಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಂ. ಮುನಿರಾಜು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!