Home Sidlaghatta ರೈತರ ಬಗ್ಗೆ ಅಸಡ್ಡೆ ತೋರುವುದು ಯಾರಿಗೂ ಶೋಭೆ ತರುವುದಿಲ್ಲ

ರೈತರ ಬಗ್ಗೆ ಅಸಡ್ಡೆ ತೋರುವುದು ಯಾರಿಗೂ ಶೋಭೆ ತರುವುದಿಲ್ಲ

0
DCC Bank Farmers Loan Sidlaghatta

ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ವ್ಯವಸಾಯ ಸಹಕಾರ ಸಂಘದ ವತಿಯಿಂದ ಮಂಗಳವಾರ ಆಯೋಜಿಸಲಾಗಿದ್ದ ರೈತರಿಗೆ ಕೆಸಿಸಿ ಸಾಲ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಮಾತನಾಡಿದರು.

ದೇಶದ ಸಮಸ್ತ ಜನರಿಗೆ ಆಹಾರ ಬೆಳೆದು ನೀಡುವ ಮೂಲಕ ದೇಶದ ಜೀತದಾಳುವಿನಂತೆ ಜೀವನ ನಡೆಸುತ್ತಿರುವ ರೈತರ ಬಗ್ಗೆ ಯಾರೂ ಅಸಡ್ಡೆ ತೋರಬಾರದು. ಸಂಕಷ್ಟದ ಸಮಯದಲ್ಲಿಯೂ ಸಹಕಾರ ಸಂಘಗಳು ಯಾವಾಗಲೂ ರೈತರ ಬೆಂಬಲಕ್ಕೆ ನಿಂತಿದೆ. ಇನ್ನು ಸಾದಲಿ ವ್ಯಾಪ್ತಿಯಲ್ಲಿರುವ ಸುಮಾರು ಹತ್ತೊಂಬತ್ತು ಹಳ್ಳಿಗಳ ಪ್ರತಿಯೊಬ್ಬ ಮಹಿಳೆಯರಿಗೂ ಬಡ್ಡಿ ರಹಿತ ಸಾಲ ನೀಡುವ ಕೆಲಸಕ್ಕೆ ಸಂಘದ ಆಡಳಿತ ಮಂಡಳಿ ಸೇರಿದಂತೆ ಸಿಬ್ಬಂದಿ ಶ್ರಮಿಸಬೇಕು ಎಂದು ಹೇಳಿದರು.

ಶಾಸಕ ವಿ.ಮುನಿಯಪ್ಪ ಮಾತನಾಡಿ ಸಂಕಷ್ಟದ ನಡುವೆ ಈ ಭಾಗದ ರೈತರು ಸೇರಿದಂತೆ ಮಹಿಳಾ ಸ್ವಸಹಾಯ ಸಂಘಗಳಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್ ಕಾರ್ಯ ನಿರ್ವಹಿಸುತ್ತಿದ್ದು ಪಡೆದ ಸಾಲವನ್ನು ಸಕಾಲದಲ್ಲಿ ಮರು ಫಾವತಿಸುವ ಮೂಲಕ ಪ್ರತಿಯೊಬ್ಬರೂ ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಜೊತೆಗೆ ಮತ್ತಷ್ಟು ಜನರಿಗೆ ಸಾಲ ವಿತರಿಸಲು ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ಸಾದಲಿ ವ್ಯವಸಾಯ ಸಹಕಾರ ಸಂಘದ ವತಿಯಿಂದ ಸುಮಾರು ೨ ಕೋಟಿ ೪೦ ಲಕ್ಷ ಕೆಸಿಸಿ ಸಾಲವನ್ನು ರೈತರಿಗೆ ವಿತರಿಸಲಾಯಿತು.

ಡಿಸಿಸಿ ಬ್ಯಾಂಕ್ ಉಪಾದ್ಯಕ್ಷ ಎ.ನಾಗರಾಜ್, ಸಾದಲಿ ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷ ಅಶ್ವತ್ಥರೆಡ್ಡಿ, ಮಾಜಿ ಅಧ್ಯಕ್ಷ ಲಕ್ಷಿö್ಮÃಪತಿ, ಗ್ರಾ.ಪಂ ಮಾಜಿ ಅಧ್ಯಕ್ಷ ಗೋವಿಂದರಾಜು, ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ಆನಂದ್, ಮೇಲ್ವಿಚಾರಕ ಶ್ರೀನಾಥ್, ಮುಖಂಡರಾದ ದಿಬ್ಬೂರಹಳ್ಳಿ ಡಿಎಸ್‌ಎನ್ ರಾಜು, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೀಮಪ್ಪ, ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

 

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version