Tag Archives: Sri Sai International School

ಶಾಲಾ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ

Sidlaghatta : ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರವು ಪಾತ್ರ ಮಹತ್ತರವಾಗಿದೆ. ಆದ್ದರಿಂದ ಅವರಲ್ಲಿ ಶಿಸ್ತು, ಆಚಾರ, ವಿಚಾರ ಹಾಗೂ ಸಂಸ್ಕೃತಿಯನ್ನು ಮೈಗೂಡಿಸಿ, ದೇಶದ ಆಸ್ತಿಗಳನ್ನಾಗಿ ರೂಪಿಸಬೇಕಿದೆ ಎಂದು ಶ್ರೀಸಾಯಿ ಇಂಟರ್ ನ್ಯಾಷನಲ್ ರೆಸಿಡೆನ್ಸಿಯಲ್ ಶಾಲೆಯ ಅಧ್ಯಕ್ಷೆ ದೀಪಾ ಮಂಜುನಾಥ್ ತಿಳಿಸಿದರು.

ತಾಲ್ಲೂಕಿನ ಬಶೆಟ್ಟಹಳ್ಳಿ ಕ್ರಾಸ್ ನಲ್ಲಿರುವ ಶ್ರೀಸಾಯಿ ಇಂಟರ್ ನ್ಯಾಷನಲ್ ರೆಸಿಡೆನ್ಸಿಯಲ್ ಶಾಲೆಯಲ್ಲಿ, ನರ್ಸರಿ, ಎಲ್.ಕೆ.ಜಿ ಹಾಗೂ ಯುಕೆಜಿ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಅಕ್ಷರಾಭ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಂದೆ-ತಾಯಿ ಮಕ್ಕಳು ಸಜ್ಜನರಾಗಿ ಬೆಳೆಯಲು ಉತ್ತಮ ವಾತಾವರಣ ಕಲ್ಪಿಸಬೇಕು. ಅವರಿಗೆ ಮಹನೀಯರ ಕಥೆಗಳನ್ನು ಹೇಳಿ ಅವರ ಆದರ್ಶಗಳನ್ನು ಮಕ್ಕಳಲ್ಲಿ ಮೈಗೂಡಿಸಬೇಕೆಂದು ಹೇಳಿದರು.

ಶಾಲೆಯಿಂದ ಬರುವ ಮಕ್ಕಳಿಗೆ ಮನೆಯಲ್ಲಿ ಸರಿಯಾಗಿ ಪಾಠ ಕಲಿಸಬೇಕು. ಮಕ್ಕಳ ಮುಂದೆ ಯಾವುದೇ ಕಾರಣಕ್ಕೂ ಜಗಳವಾಡಬಾರದು. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಲು ತಾಯಿಯ ಪಾತ್ರ ನಿರಂತರವಾಗಿರಬೇಕು. ತಾಯಿಯಿಂದ ಪ್ರಾರಂಭವಾದ ಪಾಠದಿಂದ ಮಕ್ಕಳು ಸರಿಯಾದ ದಾರಿಯಲ್ಲಿ ಸಾಗಿದರೆ, ಅತ್ಯುನ್ನತ ಸ್ಥಾನ ತಲುಪಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿಂದೂ-ಮುಸ್ಲಿಮರು ಎನ್ನುವ ಬೇಧಭಾವವಿಲ್ಲದೆ, ತಮ್ಮ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು.

ಶಾಲೆಯ ಸಂಸ್ಥಾಪಕ ಮಂಜುನಾಥ್, ಮುಖ್ಯ ಶಿಕ್ಷಕರಾದ ಪ್ರೀತಿ, ಮುಬಾರಕ್, ಸಹಶಿಕ್ಷಕರಾದ ಅಮರಾವತಿ, ಭೂಮಿಕ, ಅಕೋನ, ರೂಥ್, ಕಲಾವತಿ, ನಾಗೇಂದ್ರ, ನಾಗಮಣಿ, ಬಿಂದು, ಪ್ರಿಯಾಂಕ, ಶ್ರೀನಿವಾಸ್, ಸುಷ್ಮಾ, ಉಷಾ, ಸರಿತ, ನವೀನ್ ಕುಮಾರ್, ಸೌಮ್ಯ, ಅಭಯ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಅಕ್ಷರಾಭ್ಯಾಸ, ಶಾಲಾ ಸಂಸ್ಥಾಪಕರ ದಿನಾಚರಣೆ

Sidlaghatta : ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿ ಸಮಾಜದ ಮೇರು ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ ಎಂದು ಶ್ರೀಸಾಯಿ ಇಂಟರ್ ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯ ಕಾರ್ಯದರ್ಶಿ ಎಂ.ಮಂಜುನಾಥ್ ಅಭಿಪ್ರಾಯಪಟ್ಟರು.

ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ ಶ್ರೀ ಸಾಯಿ ಇಂಟರ್ ನ್ಯಾಷನಲ್ ರೆಸಿಡೆನ್ಶಿಯಲ್ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಕ್ಷರಾಭ್ಯಾಸ, ಶಾಲಾ ಸಂಸ್ಥಾಪಕರ ದಿನಾಚರಣೆಯಲ್ಲಿ ಮಾತನಾಡಿದರು.

ವ್ಯಕ್ತಿತ್ವ ವಿಕಸನಕ್ಕೆ ಪೂರಕ ಅಂಶಗಳನ್ನು, ಗುಣಾತ್ಮಕ ಭಾವನೆ ಮೈಗೂಡಿಸಿ ವಿಶಿಷ್ಟ ಸಾಧನೆ ಮಾಡಬಲ್ಲ ಮನೋಬಲ ಹಾಗೂ ಸಹಕಾರವನ್ನು ಮಕ್ಕಳಿಗೆ ಒದಗಿಸಬೇಕೆಂದು ಪೋಷಕರಿಗೆ ಸಲಹೆ ನೀಡಿದರು.

ಶಾಲೆಯಲ್ಲಿ ನೀಡುವ ಶಿಕ್ಷಣ ಮಕ್ಕಳಲ್ಲಿ ಜೀವನ ನಿರ್ವಹಿಸುವ ಪಾಠವನ್ನು ಹೇಳಿಕೊಟ್ಟರೆ, ಮನೆಗಳಲ್ಲಿ ನೀಡುವ ಶಿಕ್ಷಣವು ಮಕ್ಕಳ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿರುತ್ತದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಉಪಯೋಗಿಸುವ ವ್ಯಕ್ತಿಗಳನ್ನಾಗಿ ರೂಪಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ಶಾಲೆಯಲ್ಲಿ ವಿಶೇಷ ಪೂಜೆ, ಹೋಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಕ್ಷರಾಭ್ಯಾಸದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದ ಇನ್ನೂರಕ್ಕೂ ಹೆಚ್ಚಿನ ಪೋಷಕರು ತಮ್ಮ ನರ್ಸರಿ ಹಾಗೂ ಒಂದನೇ ತರಗತಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು. ಭಾರತೀಯ ಸಂಸ್ಕೃತಿ, ಪರಂಪರೆಯನ್ನು ಎತ್ತಿಹಿಡಿಯುವ ಇಂತಹ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಲು ಪೋಷಕರು ತಮ್ಮ ಅಭಿಲಾಷೆ ವ್ಯಕ್ತಪಡಿಸಿದರು.

ಸಂಸ್ಥೆಯ ಅಧ್ಯಕ್ಷೆ ಜೆ.ದೀಪ, ಮುಖ್ಯ ಶಿಕ್ಷಕಿ ಅನುಷ, ಶಿಕ್ಷಕರಾದ ಶ್ರೀಕಾಂತ್, ಚಿಕ್ಕಣ್ಣ, ಶಶಿಕಲಾ, ಸತೀಶ್ ಹಾಜರಿದ್ದರು.

ಪೋಷಕರಿಂದ ಮಕ್ಕಳಿಗೆ ಅಕ್ಷರಾಭ್ಯಾಸ

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬಶೆಟ್ಟಹಳ್ಳಿ (Bashattihalli) ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ (Sri Sai International School) ಬುಧವಾರ ಹಮ್ಮಿಕೊಂಡಿದ್ದ ಅಕ್ಷರಾಭ್ಯಾಸ, ಶಾಲಾಸಂಸ್ಥಾಪಕರ ದಿನಾಚರಣೆಯಲ್ಲಿ (Founders Day) ಶಾಲೆಯ ಕಾರ್ಯದರ್ಶಿ ಎಂ.ಮಂಜುನಾಥ್ ಅವರು ಮಾತನಾಡಿದರು.

ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆಯಾಗಿದ್ದು, ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಮೈಗೂಡಿಸಿ ಸಮಾಜದ ಮೇರು ವ್ಯಕ್ತಿಗಳನ್ನಾಗಿ ರೂಪಿಸುವಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ. ವ್ಯಕ್ತಿತ್ವ ವಿಕಸನಕ್ಕೆ ಪೂರಕ ಅಂಶಗಳನ್ನು, ಗುಣಾತ್ಮಕ ಭಾವನೆ ಮೈಗೂಡಿಸಿ ವಿಶಿಷ್ಟ ಸಾಧನೆ ಮಾಡಬಲ್ಲ ಮನೋಬಲ ಹಾಗೂ ಸಹಕಾರವನ್ನು ಮಕ್ಕಳಿಗೆ ಒದಗಿಸಬೇಕೆಂದು ಪೋಷಕರಿಗೆ ಮನವಿ ಮಾಡಿದರು.

ಶಾಲೆಯಲ್ಲಿ ನೀಡುವ ಶಿಕ್ಷಣ ಮಕ್ಕಳಲ್ಲಿಯೇ ಜೀವನ ನಿರ್ವಹಿಸುವ ಪಾಠವನ್ನು ಹೇಳಿಕೊಟ್ಟರೆ, ಮನೆಗಳಲ್ಲಿ ನೀಡುವ ಶಿಕ್ಷಣವು ಮಕ್ಕಳ ಜೀವನವನ್ನೇ ಬದಲಾಯಿಸುವ ಶಕ್ತಿ ಹೊಂದಿರುತ್ತದೆ. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಸಮಾಜದ ಒಳಿತಿಗಾಗಿ ಉಪಯೋಗಿಸುವ ವ್ಯಕ್ತಿಗಳನ್ನಾಗಿ ರೂಪಿಸಬೇಕೆಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ಶಾಲೆಯಲ್ಲಿ ವಿಶೇಷ ಪೂಜೆ, ಹೋಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಅಕ್ಷರಾಭ್ಯಾಸದಲ್ಲಿ ಉತ್ಸಾಹದಿಂದ ಭಾಗವಹಿಸಿದ್ದ ಇನ್ನೂರಕ್ಕೂ ಹೆಚ್ಚಿನ ಪೋಷಕರು ತಮ್ಮ ನರ್ಸರಿ ಹಾಗೂ ಒಂದನೇ ತರಗತಿಯ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದರು.

ಸಂಸ್ಥೆಯ ಅಧ್ಯಕ್ಷೆ ಜೆ.ದೀಪ, ಮುಖ್ಯ ಶಿಕ್ಷಕ ಹರ್ಷಕುಮಾರ್, ಶಿಕ್ಷಕರಾದ ಶ್ರೀಕಾಂತ್, ಚಿಕ್ಕಣ್ಣ, ಶಶಿಕಲಾ, ರಘು, ನಂದಿನಿ, ಕಿರಿಜಾ, ಸೋರೆಫಿ ಜಿಮಿಕ್, ಲೆಶಿಯೋ ರಾಮರ, ಮಂಜುವಾಣಿ, ಅಂಜುಮ್, ಮೋನಿಕಾ, ಸಿಬ್ಬಂದಿಯಾದ ಸೌಮ್ಯ, ನಾಗಮಣಿ ಹಾಜರಿದ್ದರು.