News

ಸಾರಿಗೆ ನೌಕರರನ್ನು ಬೆಂಬಲಿಸಿದ ಶಾಸಕ ವಿ.ಮುನಿಯಪ್ಪ

V Muniyappa support KSRTC Bus Drivers Protest

ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನಾದರೂ ಸರ್ಕಾರ ಈಗಾಗಲೇ ಈಡೇರಿಸಿ ಅವರೊಂದಿಗೆ ಮಾತಾಡಿ ಅವರ ಕಷ್ಟವನ್ನು ಅರ್ಥಮಾಡಿಕೊಳ್ಳಬೇಕಿತ್ತು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.

 ನಗರದ ಪ್ರವಾಸಿ ಮಂದಿರದ ಬಳಿ ಶುಕ್ರವಾರ ಸಾರಿಗೆ ನೌಕರರು ಮತ್ತು ರಾಜ್ಯ ರೈತ ಸಂಘದ ಸದಸ್ಯರು ಶಾಸಕರನ್ನು ಭೇಟಿ ಮಾಡಿ ಸಾರಿಗೆ ನೌಕರರ ಮುಷ್ಕರಕ್ಕೆ ಬೆಂಬಲಿಸಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು.

 ಕಳೆದ ವರ್ಷದ ನವೆಂಬರ್ನಲ್ಲಿ ಸಾರಿಗೆ ನೌಕರರು 10 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದರು. ಅವುಗಳಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದು ಹಾಗೂ 6ನೇ ವೇತನ ಆಯೋಗದಂತೆ ಸಂಬಳ ಜಾರಿ ಬೇಡಿಕೆಗಳು ಪ್ರಮುಖವಾಗಿದ್ದು. ಆಗ ಮುಷ್ಕರನಿರತ ನೌಕರರೊಂದಿಗೆ ಮಾತುಕತೆ ನಡೆಸಿದ್ದ ಸರ್ಕಾರ 10 ಬೇಡಿಕೆಗಳಲ್ಲಿ ಸರ್ಕಾರಿ ನೌಕರರೆಂದು ಪರಿಗಣನೆ ಒಂದನ್ನು ಬಿಟ್ಟು ಉಳಿದ 9 ಬೇಡಿಕೆ ಈಡೇರಿಸುವ ಬಗ್ಗೆ ಲಿಖಿತ ಭರವಸೆ ನೀಡಿತ್ತು. ಆದರೆ, ನಾಲ್ಕು ತಿಂಗಳು ಕಳೆದರೂ ಸರ್ಕಾರ ನೀಡಿದ್ದ ಭರವಸೆಯಂತೆ ನಡೆದುಕೊಂಡಿಲ್ಲ ಎಂದು ಆರೋಪಿಸಿ ಸಾರಿಗೆ ನೌಕರರು ಇದೀಗ ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಸರ್ಕಾರದ ನೌಕರರು ಸರ್ಕಾರದ ಒಂದು ಅಂಗದಂತೆ. ಅವರ ಕಷ್ಟದ ಬಗ್ಗೆ ಅವಕಾಶ ಸಿಕ್ಕಾಗ ಖಂಡಿತ ದನಿ ಎತ್ತುತ್ತೇನೆ ಎಂದು ಹೇಳಿದರು.

 ಈ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಮುನಿನಂಜಪ್ಪ, ಕೆಂಪಣ್ಣ, ಮಂಜುನಾಥ್ ಕೆಂಪರೆಡ್ಡಿ. ಬೆಳ್ಳೂಟಿ ತಮ್ಮಣ್ಣ, ರಾಜಶೇಖರ್, ಅಶ್ವತಪ್ಪ, ಸಾರಿಗೆ ನೌಕರರಾದ ನಾಗರಾಜ್, ವೆಂಕಟೇಶ್, ಗೋವಿಂದರಾಜು, ರಾಘವೇಂದ್ರ, ದೇವಪ್ಪ ಹಾಜರಿದ್ದರು.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

Sidlaghatta Congress Felicitation Meeting

News

ಪ್ರತಿಷ್ಠೆ ಬಿಟ್ಟು ಪಕ್ಷಕ್ಕಾಗಿ ಒಂದಾಗಿ ಕಾರ್ಯನಿರ್ವಹಿಸಿ : ಸಚಿವ ಡಾ.ಎಂ.ಸಿ.ಸುಧಾಕರ್

Sidlaghatta : ವ್ಯಕ್ತಿಗಿಂತ ಪಕ್ಷ ಮುಖ್ಯ ಪಕ್ಷಕ್ಕಿಂತಲೂ ದೇಶ ಮುಖ್ಯ. ಹಾಗಾಗಿ ಎಲ್ಲರೂ ತಮ್ಮ ತಮ್ಮ ವೈಯಕ್ತಿಕ ಪ್ರತಿಷ್ಠೆಯನ್ನು ಬದಿಗಿಟ್ಟು ಪಕ್ಷದ ಸಂಘಟನೆ, ಪಕ್ಷದ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Sidlaghatta Congress V Muniyappa Meeting

News

Congress ಸಮಿತಿಯ ರಾಜ್ಯ ಉಪಾಧ್ಯಕ್ಷ ವಿ.ಮುನಿಯಪ್ಪ ಜೊತೆ ಕಾರ್ಯಕರ್ತರ ಸಭೆ

Sidlaghatta : ಈ ಲೋಕಸಭೆ ಚುನಾವಣೆಯಲ್ಲಿ ಕೋಲಾರ ಸಂಸತ್ ಕ್ಷೇತ್ರದ Congress ಅಭ್ಯರ್ಥಿ ಗೌತಮ್ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಸನ್ನದ್ಧರಾಗುವಂತೆ ಮಾಜಿ ಸಚಿವ,…

Share